ಕೇರಳ ಸೇರಿದಂತೆ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 27 ರಂದು ಪ್ರಧಾನ ಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಲಿದ್ದಾರೆ.
ನಂತರ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ, ಅದಲ್ಲದೆ ಕೋವಿಡ್ ಜಾಗೃತಿಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು.
ಹಿಂದಿನ ಅನುಭವಗಳನ್ನು ಆಧರಿಸಿ ಕೋವಿಡ್ ನಿರ್ವಹಣೆಗೆ ಸ್ಪಷ್ಟ ಮುನ್ನೆಚ್ಚರಿಕೆ ವಹಿಸಲಾಗುವುದು. ವಿಜ್ಞಾನಿಗಳು, ತಜ್ಞರ ಸಲಹೆಗಳನ್ನು ಕೂಡ ಪಡೆಯಲಾಗುವುದು. ಏಪ್ರಿಲ್ 27 ರ ನಂತರ ಕೋವಿಡ್ ಶಿಷ್ಟಾಚಾರ ಸಿದ್ಧಪಡಿಸಲಾಗುವುದು.
ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿ ಸಾಹಿಲ್ ಬಾಗ್ಲಾ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ ಮತ್ತಿತರರು ಇದ್ದರು.