ಹೊಸೂರು ಬಸ್ ನಿಲ್ದಾಣದಿಂದ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭ

ಹೊಸೂರು ಬಸ್ ನಿಲ್ದಾಣದಿಂದ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣಕ್ಕೆ ಮೇ 23 ರಿಂದ ನೂತನ ಬಸ್ ಸಂಚಾರ ಆರಂಭಿಸಲಾಗಿದೆ. ಬಸ್ಸುಗಳು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚರಿಸಲಿವೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಭರತ್ ಎಸ್ ಅವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಧಾರವಾಡ ನಗರ ಸಾರಿಗೆ ವಿಭಾಗದ 1ನೇ ಘಟಕದಿಂದ ನೂತನ ಸೇವೆಯನ್ನು ಆರಂಭಿಸಲಾಗಿದೆ.

ಹೊಸೂರು ಬಸ್ ನಿಲ್ದಾಣದಿಂದ ಹೊಸ ಕೋರ್ಟ್‌, ಸುಚಿರಾಯು ಆಸ್ಪತ್ರೆ ಮಾರ್ಗವಾಗಿ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣಕ್ಕೆ ಪ್ರತಿ 20 ನಿಮಿಷಕ್ಕೊಂದರಂತೆ ನೂತನ ಬಸ್ ಗಳು ಸಂಚರಿಸಲಿವೆ.

ನಗರ ಹಾಗೂ ಬೇರೆ ಬೇರೆ ಸ್ಥಳಗಳಿಂದ ಬರುವ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!