35.38 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಅಭಿವೃದ್ಧಿ

ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ ವನ್ನು 35.38 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ಸೌಕರ್ಯಗಳೊಂದಿಗೆ ಪುನರ್ ನಿರ್ಮಾಣ ಮಾಡುವ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿ ಚಾಲನೆ ನೀಡಲಾಯಿತು. 

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕಾಮಗಾರಿ ನಡೆಯುತ್ತಿದೆ.

ನೆಲಮಹಡಿಯಲ್ಲಿ 10 ಸಿಟಿಬಸ್ ಹಾಗು 11 BRTS ಬಸ್ಸುಗಳನ್ನು ನಿಲ್ಲಿಸಲು ವ್ಯವಸ್ಥೆ ಇರಲಿದೆ. ಮೊದಲನೇ ಮಹಡಿಯಲ್ಲಿ 14 ಸಬ್ ಅರ್ಬನ್ ಬಸ್ ನಿಲ್ಲಲು ಹಾಗೂ 16 ಐಡಲ್ ಬಸ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು.

ಒಟ್ಟು 15000 ಚದರ ಮೀಟರ್ ಪ್ರದೇಶದಲ್ಲಿ, 4935 ಚದರ ಮೀಟರ್ ರಷ್ಟು ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿರಲಿದೆ. 86 ಕಾರುಗಳಿಗೆ ಹಾಗೂ 77 ದ್ವಿಚಕ್ರ ವಾಹನಗಳನ್ನು ನಿಲ್ಲಿಸುವ ವ್ಯವಸ್ಥೆ ಒಳಗೊಂಡಿರುತ್ತದೆ.‌

ವಾಣಿಜ್ಯ ಮಳಿಗೆಗಳಿಗಾಗಿ 3072 ಚದರ ಮೀಟರ್ ಪ್ರದೇಶವನ್ನು ಮೀಸಲಿಡಲಾಗಿದ್ದು,ಉಳಿದ ಪ್ರದೇಶದಲ್ಲಿ ಸಿಬ್ಬಂದಿ ಕೊಠಡಿ, ಕಚೇರಿ, ಪ್ರಥಮ ಚಿಕಿತ್ಸೆ, ಪ್ರಯಾಣಿಕರಿಗೆ ಆಸನದ ವ್ಯವಸ್ಥೆ ಹಾಗು ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲಾಗುವುದು.

ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ ದಿಂದ ಚಲಿಸುತ್ತಿದ್ದ ಸಬ್ ಅರ್ಬನ್ ಬಸ್ಸುಗಳನ್ನು ಹೊಸೂರಿನಲ್ಲಿ ಇರುವ ಬಿ.ಆರ್.ಟಿ.ಎಸ್ ಹೊಸ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಾ.ಕ.ರ.ಸಾ.ಸಂಸ್ಥೆ ತಿಳಿಸಿದೆ.

ಈ ಸಂದರ್ಭದಲ್ಲಿ  ಕರ್ನಾಟಕ ವಿಧಾನ ಪರಿಷತ್ ಮಾನ್ಯ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.‌ ಜಗದೀಶ್ ಶೆಟ್ಟರ್ , ನಗರಾಭಿವೃದ್ಧಿ ಸಚಿವರಾದ  ಬಿ ಎಸ್ ಬಸವರಾಜ್, ಶಾಸಕರಾದ ಶ್ರೀ ಅರವಿಂದ ಬೆಲ್ಲದ ಮತ್ತು ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 

Share this article!

Leave a Reply

Your email address will not be published. Required fields are marked *

error: Content is protected !!