ಇಂದು ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ವಿಕಲಚೇತನರ ಕ್ರೀಡಾಕೂಟ

ಧಾರವಾಡ (ಕರ್ನಾಟಕ ವಾರ್ತೆ) ನ.24: ವಿಶ್ವ ವಿಕಲಚೇತನರ ದಿನಾಚರಣೆ-2022ನ್ನು ಡಿಸೆಂಬರ್ 03 ರಂದು ಇಂದಿರಾ ಗಾಜಿನ ಮನೆ, ಹುಬ್ಬಳ್ಳಿಯಲ್ಲಿ ಆಚರಿಸಲಾಗುತ್ತಿದೆ.

ದಿನಾಚರಣೆಯ ನಿಮಿತ್ಯ ಪೂರ್ವಭಾವಿಯಾಗಿ ನವೆಂಬರ್ 25 ರಂದು ವಿ.ಆರ್.ಡಬ್ಲ್ಯೂ., ಯು.ಆರ್.ಡಬ್ಲ್ಯೂ., ಎಂ.ಆರ್.ಡಬ್ಲ್ಯೂ ಮತ್ತು 18 ವರ್ಷ ಮೇಲ್ಪಟ್ಟ ವಿಕಲಚೇತನರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!