ಹೆಸ್ಕಾಂನ 110 ಕೆವಿ ಲಕ್ಕಮನಹಳ್ಳಿ, ಧಾರವಾಡದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಇಂದು ಕೈಗೊಳ್ಳಲಿದೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಧಾರವಾಡದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಪ್ರದೇಶಗಳು: ಟೋಲ್-ನಾಕಾ, ಮಾಳಮಡ್ಡಿ, ನಗರಕರ ಕಾಲೋನಿ, ಬಾಗಲಕೋಟ ಪೆಟ್ರೋಲ್ ಪಂಪ್, ಲಕ್ಷ್ಮೀನಗರ, ಗಾಂಧಿ ನಗರ, ಕಲಘಟಗಿ ರಸ್ತೆ, ರಾಜೀವ ನಗರ, ಸರಸ್ವತಿನಗರ, ತೇಜಸ್ವಿನಗರ, ಸಂಗೊಳ್ಳಿ ರಾಯಣ್ಣ ನಗರ, ಗಿರಿನಗರ, ಕೆ.ಎಮ್.ಪಿ, ವೆಂಕಟೇಶ್ವರ, ಸೋಮೇಶ್ವರ, ಗಾರ್ಡನ್ ಪಾಲಿಮರ, ಜೆ.ಎಸ್.ಎಸ್.
ಮಾದರಮಡ್ಡಿ, ನವಲೂರ, ಲಕ್ಕಮನಹಳ್ಳಿ ಕೈಗಾರಿಕಾ ಪ್ರದೇಶ, ಜನ್ನತ ನಗರ, ಪಿ.ಬಿ ರಸ್ತೆ, ಮೂಗಬಸವೇಶ್ವರ, ಹೆಬ್ಬಳ್ಳಿ, ಶಿವಳ್ಳಿ, ಮಾರಡಗಿ, ಸೋಮಾಪುರ, ಗೋವನಕೊಪ್ಪ, ದೊಂಗಡಿಕೊಪ್ಪ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.