ನಾಳೆ ಧಾರವಾಡದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

110 ಕೆವಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿಸೆಂಬರ್ 18 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಾಗುವುದು.

ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಡಿಸೆಂಬರ್ 18 (ನಾಳೆ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು: ಟೋಲ್‍ನಾಕಾ, ಮಾಳಮಡ್ಡಿ, ನಗರಕರ ಕಾಲೋನಿ, ಬಾಗಲಕೋಟ ಪೆಟ್ರೋಲ್ ಪಂಪ್, ಲಕ್ಷ್ಮೀನಗರ, ಗಾಂಧಿನಗರ, ಕಲಘಟಗಿ ರಸ್ತೆ, ರಾಜೀವಗಾಂಧಿ ನಗರ, ಸರಸ್ವತಿನಗರ.

ತೇಜಸ್ವಿನಗರ, ಸಂಗೊಳ್ಳಿ ರಾಯಣ್ಣ ನಗರ, ಗಿರಿನಗರ, ಕಕ್ಕಯ್ಯಾ ನಗರ, ಗುರುದೇವ ನಗರ, ವಿದ್ಯಾಗಿರಿ, ರಜತಗಿರಿ, ಸಪ್ತಗಿರಿ, ವೈ.ಎಸ್. ಕಾಲೋನಿ, ಲಕ್ಕಮ್ಮನಹಳ್ಳಿ, ಗೋಪಾಲಪುರ, ದಾನೇಶ್ವರಿ ನಗರ, ಸನ್ಮತಿ ಮಾರ್ಗ.

ಸ್ಟೇಶನ್ ರೋಡ್, ನುಗ್ಗಿಕೇರಿ, ವಿವೇಕಾನಂದ ನಗರ, ಕೆ.ಎಮ್.ಪಿ, ವೆಂಕಟೇಶ್ವರ, ಸೋಮೇಶ್ವರ, ಗಾರ್ಡನ ಪಾಲಿಮರ, ಜೆ.ಎಸ್.ಎಸ್, ಮಾದರಮಡ್ಡಿ, ನವಲೂರ, ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ, ರಾಯಾಪುರ ಕೈಗಾರಿಕಾ ಪ್ರದೇಶ.

ಜನ್ನತ ನಗರ, ಲಕ್ಷ್ಮೀಸಿಂಗನಕೇರಿ, ಪಿ.ಬಿ. ರಸ್ತೆ, ಮೂಗಬಸವೇಶ್ವರ, ಹೆಬ್ಬಳ್ಳಿ, ಶಿವಳ್ಳಿ, ಮಾರಡಗಿ, ಸೋಮಾಪುರ, ಗೋವನಕೊಪ್ಪ, ದೊಂಗಡಿಕೊಪ್ಪ ಗ್ರಾಮ, ನಿಗದಿ, ದೇವರ ಹುಬ್ಬಳ್ಳಿ, ಕಲಕೇರಿ, ಹಳ್ಳಿಗೇರಿ, ಮನಸೂರು.

ಮನಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳು, ರಾಯಾಪುರ ಗ್ರಾಮ, ರಾಯಾಪುರ ಆಶ್ರಯ ಕಾಲೋನಿ, ವಿಠ್ಠಲ ನಗರ, ಮಯೂರ ಆದಿತ್ಯ ರೆಸಾರ್ಟ್, ರೇಷ್ಮೆ ಇಲಾಖೆ, ಇಸ್ಕಾನ್, ರಾಯಾಪುರ.

ಮತ್ತು 110ಕೆವಿ. ಲಕ್ಕಮ್ಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share this article!

Leave a Reply

Your email address will not be published. Required fields are marked *

error: Content is protected !!