ಜನವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ತಾಲೂಕು ಮಟ್ಟದಲ್ಲಿ ಆಚರಿಸುವ ಕುರಿತು ಡಿಸೆಂಬರ್ 23ರಂದು ಸಂಜೆ 4 ಗಂಟೆಗೆ ತಾಲೂಕು ಆಡಳಿತ ಸೌಧದ ತಹಸೀಲ್ದಾರ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಸಂಘ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು, ತಾಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ, ಅನಿಸಿಕೆಗಳನ್ನು ತಿಳಿಸುವಂತೆ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.