ಜನವರಿ 1 ರಂದು ಧಾರವಾಡ ಐಐಟಿ ಉದ್ಘಾಟನೆಗೆ ಸಿದ್ದತೆ

ಧಾರವಾಡ ಐಐಟಿ ನೂತನ ಕಟ್ಟಡವನ್ನು ಬರುವ ಜನವರಿ 1, 2023 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ಅಗತ್ಯ ಸಿದ್ದತೆ ಮಾಡಕೊಳ್ಳಲಾಗುತ್ತಿದೆ ಎಂದು ಪ್ರಲ್ಹಾದ ಜೋಶಿ ಅವರು ಹೇಳಿದರು.

ಅವರು ಇಂದು ಮಧ್ಯಾಹ್ನ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿರುವ ಧಾರವಾಡ ಐಐಟಿ ನೂತನ ಕಟ್ಟಡದ ಕಾಮಗಾರಿ ಪರಿಶೀಲನೆ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪ್ರಧಾನಮಂತ್ರಿಗಳನ್ನು ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆಗೆ ಆಹ್ವಾನಿಸುವ ಕುರಿತು ಈಗಾಗಲೇ ಚರ್ಚಿಸಲಾಗಿದೆ. ಪ್ರಧಾನಿಗಳು ಒಪ್ಪಿಗೆ ಸೂಚಿಸಿದ್ದಾರೆ.

ಮುಂದಿನ ವಾರ ಇನ್ನೊಮ್ಮೆ ಕಟ್ಟಡ ಕಾಮಗಾರಿ ನೋಡಿಕೊಂಡು ಉದ್ಘಾಟನೆ ದಿನಾಂಕ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

ಜನವರಿ ತಿಂಗಳಲ್ಲಿ ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡಮೂರು ಬಾರಿ ವಿವಿಧ ಕಾರ್ಯಕ್ರಮಗಳಿಗಾಗಿ ಆಗಮಿಸಲಿದ್ದಾರೆ. ಜನವರಿ 1 ರಂದು ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಆಯೋಜಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.

2019 ರ ಫೆಬ್ರವರಿ 10 ರಂದು ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಐಐಐಟಿ-ಧಾರವಾಡ ಮತ್ತು ಐಐಟಿ-ಧಾರವಾಡ ಶಾಶ್ವತ ಕ್ಯಾಂಪಸ್‌ಗೆ ಏಕಕಾಲದಲ್ಲಿ ಶಂಕುಸ್ಥಾಪನೆ ಮಾಡಿದ್ದರು.

ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ಜಿಕ್ಲಾಧಿಕಾರಿ ಗುರುದತ್ತ ಹೆಗಡೆ, ಧಾರವಾಡ ಐಐಟಿ ನೂತನ ನಿರ್ದೇಶಕ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ತಹಸಿಲ್ದಾರ ಸಂತೋಷ ಹಿರೇಮಠ, ಧಾರವಾಡ ಐಐಟಿ ಪ್ರಾಧ್ಯಾಪಕರು, ಕಟ್ಟಡ ಗುತ್ತಿಗೆದಾರರು ಉಪಸ್ಥಿತರಿದ್ದರು.

Share this article!

Leave a Reply

Your email address will not be published. Required fields are marked *

error: Content is protected !!