ಪ್ರಸ್ತಕ ಸಾಲಿನ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ ಅಥವಾ ಫೆಲೋಶಿಪ್ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ವರ್ಷದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 13 ಆಗಿರುತ್ತದೆ.
ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು ಎಂದು ವಿಜಯನಗರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8050770004 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.