ಧಾರವಾಡ ಜಿಲ್ಲಾಡಳಿತ ಮತ್ತು ಸಾರಿಗೆ ಕಚೇರಿಯ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ವಾಹನ ತಪಾಸಣಾ ಪ್ರಮಾಣೀಕರಣ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಜನವರಿ 1, 2022 ರಂದು ಸಂಜೆ 4 ಗಂಟೆಗೆ ರಾಯಾಪುರ ಕೆಐಎಡಿಬಿ ಲೇಔಟ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತರಿರುವರು. ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರು ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ, ರೇಷ್ಮೆ ಮತ್ತು ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮತ್ತು ಇತರರು ಭಾಗವಹಿಸಲಿದ್ದಾರೆ.