ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ಗೆ ಪದನಿಮಿತ್ತ ಸದಸ್ಯರಾಗಿ ಎಸ್.ಎಫ್.ಸಿದ್ಧನಗೌಡರ ನೇಮಕ

ಕನ್ನಡ ಸಾಹಿತ್ಯ ಪರಿಷತ್‍ನ ರಾಜ್ಯಾಧ್ಯಕ್ಷರ ನಿರ್ದೇಶನದಂತೆ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ಧನಗೌಡರ ಅವರನ್ನು ಜಿಲ್ಲಾ ಕಾರ್ಯಕಾರಿ ಮಂಡಳಿಗೆ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.

ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ ಅವರು ನೇಮಕಾತಿ ಮಾಡಿ ಆದೇಶಿಸಿದ್ದಾರೆ.

ನೇಮಕಾತಿ ಪತ್ರದಲ್ಲಿ ಅವರು, ಜಿಲ್ಲೆಯಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗೃತಿಗೊಳಿಸುವ ಮತ್ತು ಸಂಘಟಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ರಾಜ್ಯ ಸರ್ಕಾರಿ ನೌಕರ ಸಂಘದ ಸಹಾಯ, ಸಹಕಾರ ಮತ್ತು ಮಾರ್ಗದರ್ಶನ ಕೋರುತ್ತೇವೆ.

ಕನ್ನಡ ಉಳಿಸಿ, ಬೆಳೆಸಲು ಮತ್ತು ಆಡಳಿತದಲ್ಲಿ ಸಂಪೂರ್ಣವಾಗಿ ಕನ್ನಡ ಜಾರಿಗೊಳಿಸಲು ಜಿಲ್ಲೆಯ ಎಲ್ಲ ನೌಕರರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ಧನಗೌಡರ ಅವರು ಸಮನ್ವಯ ಮಾಡಬೇಕೆಂದು ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ ಅವರು ತಿಳಿಸಿದ್ದಾರೆ.

Share this article!

Leave a Reply

Your email address will not be published. Required fields are marked *

error: Content is protected !!