ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯಲ್ಲಿ ಅರ್ಹತಾ ಮತದಾರರ ಪಟ್ಟಿಯನ್ನು ಪ್ರಕಟಿಸುವ ಕುರಿತು ಮತದಾರರ ನೊಂದಣಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಡಿ.9ರಿಂದ ಆರಂಭಿಸಲಾಗುವುದು.
ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡುವುದರ ಮೂಲಕ ವಿಶೇಷ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದ್ದಾರೆ.
ಈಗಾಗಲೇ ಇರುವ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿದರೆ ಡಿ.03 ಮತ್ತು ಡಿ.04ರಂದು ವಿಶೇಷ ಮತದಾರ ನೊಂದಣೆ ಅಭಿಯಾನ ಕಾರ್ಯಕ್ರಮವನ್ನು ಆಯಾ ಮತಗಟ್ಟೆ ಕೇಂದ್ರಗಳಲ್ಲಿ ಮತಗಟ್ಟೆ ಅಧಿಕಾರಿಗಳು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಹಾಜರಿದ್ದು ಮತದಾರ ನೊಂದಣಿ ಕಾರ್ಯವನ್ನು ಕೈಗೊಳ್ಳುತ್ತಾರೆ.
ವಿಶೇಷ ಮತದಾರ ನೊಂದಣೆ ಅಭಿಯಾನದಲ್ಲಿ ನಮೂನೆ-6ನ್ನು ಸಲ್ಲಿಸುವ ಮೂಲಕ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ.
ಮತದಾರ ಪಟ್ಟಿಯಿಂದ ತೆಗೆಯಲು (ನಮೂನೆ-7), ತಿದ್ದುಪಡಿ ಮತ್ತು ವರ್ಗಾವಣೆಗೆ (ನಮೂನೆ-8) ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಅವರು ತಿಳಿಸಿದ್ದಾರೆ.