ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಧಾರವಾಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿನ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.
ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷೆಗಳನ್ನು ಶಾಂತಯುತವಾಗಿ, ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಧಾರವಾಡ ಜಿಲ್ಲೆಯ ಒಟ್ಟು 52 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾ ಅವಧಿಯಲ್ಲಿ 200 ಮೀಟರ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಯ ವೇಳಾಪತ್ರಿಕೆಯ ಅನುಸಾರವಾಗಿ ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯೊಳಗಿನ ಎಲ್ಲ ಝೆರಾಕ್ಸ್ ಕೇಂದ್ರಗಳು ಆಯಾ ದಿನದ ಬೆಳಗಿನ ಮತ್ತು ಅಪರಾಹ್ನದ ಪರೀಕ್ಷಾ ಅವಧಿಯಲ್ಲಿ ಮಾತ್ರ ಕಾರ್ಯನಿರ್ವಹಿಸದಂತೆ ನಿರ್ಭಂದಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.