ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ನಂತರದ ತರಗತಿಗಳಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ನಂತರದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಂದ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಟಾಕಿಂಗ್ ಲ್ಯಾಪ್‍ಟಾಪ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದೆ.
www.dwdsc.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ್‍ಕಾಪಿಯನ್ನು ಆಯಾ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ), ತಾಲೂಕಾ ಪಂಚಾಯತ ಇವರಲ್ಲಿ ಸಲ್ಲಿಸಬೇಕು.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ) ಸಂಪರ್ಕಿಸಬಹುದು.
ಮೊಬೈಲ್ ಸಂಖ್ಯೆಗಳು: ಧಾರವಾಡ – 9742757903, ಹುಬ್ಬಳ್ಳಿ – 9164347001, 8073194053, ಕಲಘಟಗಿ- 6363695794 ನವಲಗುಂದ – 9663271200 ಮತ್ತು ಕುಂದಗೋಳ – 8880570833.
ಇದಲ್ಲದೆ ಕಛೇರಿ ದೂರವಾಣಿ ಸಂಖ್ಯೆ: 0836-2744474 ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.