1200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳಿಯ ಗಬ್ಬೂರು NH4 ರಸ್ತೆಯಿಂದ ಧಾರವಾಡದ ನರೇಂದ್ರ ಕ್ರಾಸ್ ಬಳಿ ವರೆಗಿನ ಒಟ್ಟು 31.6 ಕಿಮೀ ರಸ್ತೆಯನ್ನು 6 ಪಥದ ಎಕ್ಸಪ್ರೆಸ್ ವೇ ಹಾಗೂ 4 ಪಥದ ಸರ್ವಿಸ್ ರಸ್ತೆಯ ಮಾಡಲು ಟೆಂಡರ್ ಕರೆಯಲಾಗಿದೆ.
ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನವದೆಹಲಿ ಇವರು ಹುಬ್ಬಳ್ಳಿ–ಧಾರವಾಡ ಬೈಪಾಸ್ ರಸ್ತೆಯನ್ನು ನಿರ್ಮಿಸಲು ಇ.ಪಿ.ಸಿ. Engineering, Procurement, ಹಾಗೂ Construction ಮಾದರಿಯಲ್ಲಿ ಟೆಂಡರ್ ಕರೆಯಲಾಗಿದೆ.
ಕಾಮಗಾರಿ ಮುಗಿಸಲು 2.5 ವರ್ಷ ನಿಗದಿಗೊಳಿಸಲಾಗಿದೆ ಹಾಗೂ ನಿರ್ಮಾಣದ ನಂತರ 5 ವರ್ಷದ ನಿರ್ವಹಣೆಯನ್ನೂ ಗುತ್ತಿಗೆದಾರರೆ ನಿರ್ವಹಿಸುವ ಕರಾರೊಂದಿಗೆ ಟೆಂಡರ್ ನಲ್ಲಿ ಸೂಚಿಸಲಾಗಿದೆ.
ಮುಖ್ಯವಾಗಿ ಈಗಿರುವ ಬೈಪಾಸ್ನ ಎಲ್ಲಾ ಟೋಲ್ ಪ್ಲಾಜಾಗಳನ್ನು ತೆಗೆದು ಕೇವಲ ಒಂದು ಟೋಲ್ ಪ್ಲಾಜಾ ಮಾತ್ರ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಈ ಟೋಲ್ ಕೆಲಗೇರಿ ಮತ್ತು ನರೆಂದ್ರ ಮದ್ಯೆ ಮಾಡಲಾಗಿದ್ದು ಇದರಿಂದ ಹುಬ್ಬಳ್ಳಿ –ಧಾರವಾಡ ಮಧ್ಯ ಸಂಚರಿಸುವ ಪ್ರಯಾಣಿಕರು ಟೋಲ್ ನಿಂದ ವಿನಾಯಿತಿ ನೀಡಲಾಗುವುದು. ಈ ಬೈಪಾಸ್ ನಿರ್ಮಾಣದಿಂದ ನಗರ ಮದ್ಯದೊಳಗಿನ ಸಂಚರಿಸುವ ವಾಹನ ದಟ್ಟಣೆ ಕಡಿಮೆಯಾಗಲಿದೆ.
ಧಾರವಾಡ ಸಂಸದರಾದ ಪ್ರಹ್ಲಾದ್ ಜೋಷಿ ಅವರ ಪ್ರಕಾರ “ಪುಣೆ-ಬೆಂಗಳೂರು ಹೆದ್ದಾರಿ ವಿಸ್ತರಣೆ ಆಯಿತು. ಆದರೆ ಹು-ಧಾ ಬೈಪಾಸ್ ವಿಸ್ತರಣೆ ಆಗಿಲ್ಲ. 6 ಪಥದ ರಸ್ತೆಯಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಬರುವ ಚಾಲಕರು ಬೈಪಾಸ್ ನಲ್ಲಿಯೂ ಅದೇ ವೇಗದಲ್ಲಿ ಬರುವುದರಿಂದ ಅಪಘಾತಗಳು ಸಂಭವಿಸುತ್ತವೆ”.
ತಜ್ಞರ ಅಭಿಪ್ರಾಯದೊಂದಿಗೆ ಬೈಪಾಸ್ ಕೂಡಾ ಕನಿಷ್ಠ 6 ಪಥಗಳಿಗೆ ವಿಸ್ತರಣೆ ಆಗಬೇಕೆಂಬುದು ಸಂಸದರಾದ ಪ್ರಹ್ಲಾದ್ ಜೋಷಿ ಅವರ ಆಗ್ರಹವಾಗಿತ್ತು.
ಯೋಜನೆ ಒಟ್ಟು 1200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳಿಯ ಗಬ್ಬೂರು ಎನ್.ಹೆಚ್. 4 ರಸ್ತೆಯ 402.6 ಕಿಮಿ ಯಿಂದ ಧಾರವಾಡದ ನರೇಂದ್ರ ಕ್ರಾಸ್ ಬಳಿ 433.2 ಕಿಮಿ ವರೆಗಿನ ಒಟ್ಟು 31 ಕಿಮಿ ರಸ್ತೆಯನ್ನು ಒಳಗೊಂಡಿದೆ.
6 ಪಥದ ಎಕ್ಸಪ್ರೆಸ್ ವೇ ಹಾಗೂ ನಾಲ್ಕು ಪಥದ ಸರ್ವಿಸ್ ರಸ್ತೆ ನಿರ್ಮಾಣಕ್ಕೆ 800 ಕೋಟಿ ರೂ. ಹಾಗೂ ಭೂ ಸ್ವಾದೀನ ಡಿಪಿಆರ್ ತಯಾರಿಕೆ ಹಾಗೂ ಇನ್ನಿತರೆ ಕಾರ್ಯಕ್ಕೆ 400 ಕೋಟಿ ರೂ ಕೇಂದ್ರ ಸರಕಾರ ನೀಡಿದೆ.
ಈ ಬೈಪಾಸ್ ರಸ್ತೆಗೆ ಅನುಮೋದನೆ ನೀಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಅವಳಿ ನಗರದ ನಾಗರಿಕರ ಪರವಾಗಿ ಪ್ರಹ್ಲಾದ್ ಜೋಷಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.