ದಿ ಕಾಶ್ಮೀರ ಫೈಲ್ಸ್ ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರವು ತನ್ನ ಪಾಲಿನ ರಾಜ್ಯ ಜಿಎಸ್‍ಟಿಯನ್ನು ವೀಕ್ಷಕರಿಗೆ ವಿಧಿಸದಿರಲು ಸಿನೆಮಾ ಪ್ರದರ್ಶಕರಿಗೆ ಸೂಚಿಸಿದೆ. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.
ಧಾರವಾಡ ಜಿಲ್ಲೆಯ ಸಿನೆಮಾ, ಮಲ್ಟಿಪ್ಲೆಕ್ಸ್ ಮಂದಿರಗಳ ಮಾಲೀಕರು ದಿ ಕಾಶ್ಮೀರ ಫೈಲ್ಸ್ ಟಿಕೇಟ್‍ನಲ್ಲಿ ಶೇ.9 ರಿಯಾಯಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ನಿರ್ದೇಶನದ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.
ಸಿನೆಮಾ ಹಾಗೂ ಮಲ್ಟಿಪ್ಲೆಕ್ಸ್ ಮಂದಿರಗಳ ನೊಂದಾಯಿತ ತೆರಿಗೆ ಪಾವತಿದಾರರು ವೀಕ್ಷಕರು ಹಾಗೂ ಗ್ರಾಹಕರಿಗೆ ರಾಜ್ಯದ ಪಾಲಿನ ಶೇ.9 ಜಿಎಸ್‍ಟಿ ವಿಧಿಸಬಾರದು, ಈ ಹಣವನ್ನು ಸರ್ಕಾರ ಭರಿಸಲಿದೆ.
ಟಿಕೆಟ್ ಮೇಲೆ ರಾಜ್ಯ ಸರ್ಕಾರದ ಆದೇಶದ ಮೇರೆಗೆ ರಾಜ್ಯ ಸಂಗ್ರಹಿಸಿರುವುದಿಲ್ಲ ಎಂದು ದಪ್ಪ ಅಕ್ಷರಗಳಲ್ಲಿ ಮುದ್ರಿಸಿರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ.
ಈ ಆದೇಶವು ಇಂದು ಮಾರ್ಚ್ 14 ರಿಂದ ಮುಂದಿನ ಆರು ತಿಂಗಳ ಅವಧಿಯವರೆಗೆ ಜಾರಿಯಲ್ಲಿರುತ್ತದೆ. ಜಿಎಸ್‍ಟಿ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಿ ವರದಿ ನೀಡಲು ಸೂಚಿಸಲಾಗಿದೆ.
ಸಿನೆಮಾ, ಮಲ್ಟಿಪ್ಲೆಕ್ಸ್ ಮಂದಿರಗಳ ಮಾಲೀಕರು ರಾಜ್ಯ ಜಿಎಸ್‍ಟಿ ಮರುಪಾವತಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಸರ್ಕಾರ ಪ್ರಕಟಿಸಲಿದೆ.