ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ಮತ್ತು ಮಂಗಳವಾರ ಸಾರಿಗೆ ಸಿಬ್ಬಂದಿಗೆ ವಿಶೇಷ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಸಾರಿಗೆ ನೌಕರರು ಅದರಲ್ಲೂ ಮುಖ್ಯವಾಗಿ ಚಾಲಕರು, ನಿರ್ವಾಹಕರು ಮತ್ತು ಬಸ್ ನಿಲ್ದಾಣಗಳ ಸಾರಿಗೆ ನಿಯಂತ್ರಕರು ಕೆಲಸ ನಿರ್ವಹಿಸುವಾಗ ನಿತ್ಯವೂ ವಿವಿಧ ಸ್ಥರದ ಸಾವಿರಾರು ಜನರೊಂದಿಗೆ ನೇರ ಸಂಪರ್ಕಕ್ಕೆ ಬರಬೇಕಾಗುತ್ತದೆ.ಅನೇಕ ಸಂದರ್ಭಗಳಲ್ಲಿ ಲಕ್ಷಣ ರಹಿತ ಸೋಂಕಿತರ ಮೂಲಕ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಹುಬ್ಬಳ್ಳಿ ಗ್ರಾಮಾಂತರ 1ನೇ ಘಟಕದಲ್ಲಿ ವಿಶೇಷ ಲಸಿಕಾ ಅಭಿಯಾನ ಆಯೋಜಿಸಲಾಗಿದೆ.
ಅನೇಕ ಸಂದರ್ಭಗಳಲ್ಲಿ ಲಕ್ಷಣ ರಹಿತ ಸೋಂಕಿತರ ಮೂಲಕ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಹುಬ್ಬಳ್ಳಿ ಗ್ರಾಮಾಂತರ 1ನೇ ಘಟಕದಲ್ಲಿ ವಿಶೇಷ ಲಸಿಕಾ ಅಭಿಯಾನ ಆಯೋಜಿಸಲಾಗಿದೆ.
ಹುಬ್ಬಳ್ಳಿ ಗ್ರಾಮಾಂತರ ವಿಭಾಗ, ನಗರ ಸಾರಿಗೆ ವಿಭಾಗ,ಪ್ರಾದೇಶಿಕ ಕಾರ್ಯಾಗಾರ ಹಾಗೂ ಕೇಂದ್ರ ಕಚೇರಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಲಸಿಕೆ ಪಡೆಯಬಹುದಾಗಿದೆ.
ಸಾರ್ವಜನಿಕರು ಹಾಗೂ ಸಿಬ್ಬಂದಿ ಗಳ ಆರೋಗ್ಯದ ಹಿತದೃಷ್ಟಿಯಿಂದ ಸೋಂಕು ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ತ್ವರಿತವಾಗಿ ಸ್ಪಂದಿಸಿ ಅಗತ್ಯ ನೆರವು ನೀಡಿದೆ ಎಂದು ಅವರು ಕೃತಜ್ಞತೆ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಒಟ್ಟು 2032 ನೌಕರರಿದ್ದಾರೆ.ಅವರಲ್ಲಿ 1448 ಚಾಲಕರು/ನಿರ್ವಾಹಕರು,298 ತಾಂತ್ರಿಕ ಸಿಬ್ಬಂದಿಗಳಿದ್ದಾರೆ. ಇನ್ನುಳಿದವರು ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿ ಇದ್ದಾರೆ. ಈಗಾಗಲೆ ಎಲ್ಲರೂ ಒಂದು ಡೋಸ್ ಪಡೆದಿದ್ದಾರೆ.
200ಕ್ಕೂ ಹೆಚ್ಚು ಸಿಬ್ಬಂದಿ ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಎರಡನೆ ಡೋಸ್ ಪಡೆಯುವ ನೌಕರರಿಗೆ ಇದರಿಂದ ಅನುಕೂಲವಾಗಲಿದೆ. ಸಂಭಾವ್ಯ ಮೂರನೆ ಅಲೆಯಿಂದ ರಕ್ಷಣೆ ಪಡೆಯಲು ಎಲ್ಲಾ ಅರ್ಹ ನೌಕರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಸೂಚಿಸಿದ್ದಾರೆ.